ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಭಾನುವಾರ ನೌಬೋಯಿಚಾ (ಉತ್ತರ ಲಖಿಂಪುರ ಜಿಲ್ಲೆ)ಯಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ, ಐದು ಗ್ಯಾರಂಟಿಗಳನ್ನು ಪ್ರಕಟಿಸಿದರು.
ಮಹಿಳಾ ಕಲ್ಯಾಣ, ಆರೋಗ್ಯ ಸೇವೆ, ಭೂಮಿ ಹಕ್ಕು ಹಾಗೂ ಜುಬೀನ್ ಗಾರ್ಗ್ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸುವ ಭರವಸೆ ಸೇರಿದಂತೆ ಐದು ಗ್ಯಾರಂಟಿಗಳನ್ನು ಅವರು ಘೋಷಿಸಿದರು.
ಈ ಐದು ಗ್ಯಾರಂಟಿಗಳು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ತಕ್ಷಣ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ ಅವರು, ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರ ಮತ್ತು ಭಯದ ವಾತಾವರಣವನ್ನು ತೀವ್ರವಾಗಿ ಟೀಕಿಸಿದರು.
ಅಸ್ಸಾಂ ವಿಧಾನಸಭಾ ಚುನಾವಣೆ ಏಪ್ರಿಲ್ 9 ರಂದು ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…