ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಗುರುವಾರ ಸಂಜೆ 4 ಗಂಟೆಗೆ ಲುಮ್ಡಿಂಗ್-ಬರ್ದಾರ್‌ಪುರ ಹಿಲ್ ವಿಭಾಗದಲ್ಲಿ ಲುಮ್ಡಿಂಗ್ ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ.
ಅಗರ್ತಲಾದಿಂದ ಹೊರಡಿದ್ದ ರೈಲು ಮುಂಬೈಗೆ ತೆರಳುತ್ತಿತ್ತು. ಈ ವೇಳೆ ರೈಲಿನ ಎಂಜಿನ್ ಸೇರಿದಂತೆ 8 ಬೋಗಿಗಳು ಹಳಿತಪ್ಪಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಗೊಂಡಿರುವ ಬಗ್ಗೆಯು ವರದಿಯಾಗಿಲ್ಲ ಎಂದು ರೈಲ್ವೆ ವಲಯದ ಸಿಪಿಆರ್‌ಒ ಹೇಳಿದ್ದಾರೆ.
ಸದ್ಯ ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದ್ದು, ವೈದ್ಯಕೀಯ ನೆರವಿಗಾಗಿ ಸ್ಥಳಕ್ಕೆ ರೈಲು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…