Mysore
24
haze

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಅಸ್ಸಾಂನ “ಮೋಯಿದಾಮ್‌”

ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಅಹೋಮ್‌ ರಾಜವಂಶದ ದಿಬ್ಬದ ಸಮಾಧಿ ವ್ಯವಸ್ಥೆ ʼಮೋಯಿದಾಮ್‌ʼಗಳನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ ಸಾಂಸ್ಕೃತಿಕ ಪಾರಂಪರಿಕ ಪಟ್ಟಿಗೆ ಸೇರಿದ ಮೊದಲ ಈಶಾನ್ಯ ರಾಜ್ಯದ ತಾಣ ಎಂಬ ಹೆಗ್ಗಳಿಕೆಯನ್ನು ಹೊಂದಲಿದೆ.

ದೆಹಲಿಯಲ್ಲಿ ನಡೆಯುತ್ತಿರುವ ವಿಶ್ವ ಪಾರಂಪರಿಕ ಸಮಿತಿಯ 46ನೇ ಸಮ್ಮೇಳನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅಸ್ಸಾಂ ರಾಜ್ಯವನ್ನಾಳಿದ ಅಹೋಮ್‌ ಸಾಮ್ರಾಜ್ಯದ ದಿಬ್ಬಗಳ ಸಮಾಧಿ ವ್ಯವಸ್ಥೆಯನ್ನು ʼಮೋಯಿದಾಮ್‌ʼಗಳು ಎಂದು ಕರೆಯಲಾಗುತ್ತದೆ. ಅಹೋಮ್‌ ಮನೆತನ ಅಸ್ಸಾಂನಲ್ಲಿ 600 ವರ್ಷಗಳ ಕಾಲ ಆಳ್ವಿಕೆ ನಡೆಸಿತ್ತು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಸ್ಸಾಂ ರಾಜ್ಯದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್‌ ಅವರು ಮೋಯಿದಾಮ್‌ ಗಳನ್ನು ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರಿಸಿರುವ ಬಗ್ಗೆ ಟ್ವಿಟ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Tags: