ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಅಹೋಮ್ ರಾಜವಂಶದ ದಿಬ್ಬದ ಸಮಾಧಿ ವ್ಯವಸ್ಥೆ ʼಮೋಯಿದಾಮ್ʼಗಳನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ ಸಾಂಸ್ಕೃತಿಕ ಪಾರಂಪರಿಕ ಪಟ್ಟಿಗೆ ಸೇರಿದ ಮೊದಲ ಈಶಾನ್ಯ ರಾಜ್ಯದ ತಾಣ ಎಂಬ ಹೆಗ್ಗಳಿಕೆಯನ್ನು ಹೊಂದಲಿದೆ.
ದೆಹಲಿಯಲ್ಲಿ ನಡೆಯುತ್ತಿರುವ ವಿಶ್ವ ಪಾರಂಪರಿಕ ಸಮಿತಿಯ 46ನೇ ಸಮ್ಮೇಳನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಸ್ಸಾಂ ರಾಜ್ಯವನ್ನಾಳಿದ ಅಹೋಮ್ ಸಾಮ್ರಾಜ್ಯದ ದಿಬ್ಬಗಳ ಸಮಾಧಿ ವ್ಯವಸ್ಥೆಯನ್ನು ʼಮೋಯಿದಾಮ್ʼಗಳು ಎಂದು ಕರೆಯಲಾಗುತ್ತದೆ. ಅಹೋಮ್ ಮನೆತನ ಅಸ್ಸಾಂನಲ್ಲಿ 600 ವರ್ಷಗಳ ಕಾಲ ಆಳ್ವಿಕೆ ನಡೆಸಿತ್ತು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಸ್ಸಾಂ ರಾಜ್ಯದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮೋಯಿದಾಮ್ ಗಳನ್ನು ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರಿಸಿರುವ ಬಗ್ಗೆ ಟ್ವಿಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…