ದೇಶ- ವಿದೇಶ

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ನಾಳೆ ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಆರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು, ಮತ್ತು ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೆರಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಏಕಕಾಲಕ್ಕೆ ನಡೆಯಲಿದ್ದು, ಮತದಾರನ ತೀರ್ಪು ಯಾರಿಗೆ ಎಂಬುದು ನಾಳೆಯೇ ಬಹಿರಂಗವಾಗಲಿದೆ.

ಮುಂಬರುವ 2029ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖವಾಗಿ ಬಿಜೆಪಿ, ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಎಐಡಿಎಂಕೆ, ಪಿವಿಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಒಟ್ಟಾರೆಯಾಗಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಯಾರಿಗೆ ವಿಜಯಮಾಲೆ ದೊರೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

9 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

11 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago