Mysore
27
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕುಬಿಟ್ಟ ಅಟಲ್‌ ಸೇತುವೆ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ಟೀಕೆ

ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆಯಾದ ಅಟಲ್‌ ಸೇತುವೆ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು ಬಿಟ್ಟಿವೆ. ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು, ಇದೊಂದು ಭ್ರಷ್ಟಾಚಾರದ ವಾಸನೆಯಾಗಿದೆ ಎಂದು ದೂರಿದ್ದಾರೆ.

ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಬಿರುಕು ಮೂಡಿದ್ದು, ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಲಿದೆ ಎಂದು ಅವರು ಹೇಳಿದ್ದಾರೆ.

ಅಟಲ್‌ ಸೇತು ಕಳಪೆ ಕಾಮರಾಗಿ ವೀಕ್ಷಿಸಿದ ಬಳಿಕ ಸೇತುವೆಗೆ ಗುಣಮಟ್ಟದ ಕಾಮಗಾರಿ ನಡೆದಿಲ್ಲ. ರಸ್ತೆಯ ಒಂದು ಭಾಗವು ಒಂದು ಅಡಿಗಳಷ್ಟು ಕುಸಿತ ಕಂಡಿದೆ ಎಂದು ಪ್ರತಿಪಾದಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲಾ ಮಿತಿಗಳನ್ನು ದಾಟಿದ್ದು, ಜನರ ಜೀವನವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದರು.

17,840 ಕೋಟಿ ರೂ ವೆಚ್ಚದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ʼಅಟಲ್‌ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್‌ ಸೇತುವನ್ನು ಇದೇ ಜನವರಿಯಲ್ಲಿ ಉದ್ಘಾಟಿಸಿದರು. ಇದು ಸಮುದ್ರ ಮಾರ್ಗದಲ್ಲಿ ಸುಮಾರು 21.8 ಕಿ,ಮೀ ಉದ್ದ ಕ್ರಮಿಸುವ ಜಲಮಾರ್ಗದ ರಸ್ತೆಯಾಗಿದೆ.

Tags:
error: Content is protected !!