ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆಯಾದ ಅಟಲ್ ಸೇತುವೆ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು ಬಿಟ್ಟಿವೆ. ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು, ಇದೊಂದು ಭ್ರಷ್ಟಾಚಾರದ ವಾಸನೆಯಾಗಿದೆ ಎಂದು ದೂರಿದ್ದಾರೆ.
ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಬಿರುಕು ಮೂಡಿದ್ದು, ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಲಿದೆ ಎಂದು ಅವರು ಹೇಳಿದ್ದಾರೆ.
ಅಟಲ್ ಸೇತು ಕಳಪೆ ಕಾಮರಾಗಿ ವೀಕ್ಷಿಸಿದ ಬಳಿಕ ಸೇತುವೆಗೆ ಗುಣಮಟ್ಟದ ಕಾಮಗಾರಿ ನಡೆದಿಲ್ಲ. ರಸ್ತೆಯ ಒಂದು ಭಾಗವು ಒಂದು ಅಡಿಗಳಷ್ಟು ಕುಸಿತ ಕಂಡಿದೆ ಎಂದು ಪ್ರತಿಪಾದಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲಾ ಮಿತಿಗಳನ್ನು ದಾಟಿದ್ದು, ಜನರ ಜೀವನವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದರು.
17,840 ಕೋಟಿ ರೂ ವೆಚ್ಚದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ʼಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುವನ್ನು ಇದೇ ಜನವರಿಯಲ್ಲಿ ಉದ್ಘಾಟಿಸಿದರು. ಇದು ಸಮುದ್ರ ಮಾರ್ಗದಲ್ಲಿ ಸುಮಾರು 21.8 ಕಿ,ಮೀ ಉದ್ದ ಕ್ರಮಿಸುವ ಜಲಮಾರ್ಗದ ರಸ್ತೆಯಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…