ಹೊಸದಿಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ದೆಹಲಿಯ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಪ್ರಶ್ನೆ ಮೂಡಿತ್ತು. ಆದರೆ, ಇದೀಗ ಈ ವಿಚಾರವಾಗಿ ಎಎಪಿ ಶಾಸಕಾಂಗದಿಂದ ತೆರೆ ಬಿದ್ದಿದ್ದು, ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ದೆಹಲಿಯ ಸಿಎಂ ಹುದ್ದೆಗಾಗಿ ಎಎಪಿ ಶಾಸಕರ ನಡುವೆ ರೇಸ್ ಶುರುವಾಗಿತ್ತು. ಈ ರೇಸ್ನಲ್ಲಿ ಕಲ್ಕಾಜಿ ಕ್ಷೇತ್ರದ ಶಾಸಕಿ ಅತಿಶಿ ಅವರು ಮುಂಚೂಣಿಯಲ್ಲಿದ್ದರು. ಪ್ರಸ್ತುತ PWD ಶಿಕ್ಷಣ ಸಚಿವೆಯಾಗಿರುವ ಅತಿಶಿಯವರು ಕೇಜ್ರಿವಾಲ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ಸರ್ಕಾರವನ್ನು ಮುನ್ನೆಡೆಸಿದ್ದರು. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರು, ಎಎಪಿ ಶಾಸಕಾಂಗದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅಂತಿಮವಾಗಿ 43 ವರ್ಷದ ಅತಿಶಿ ಅವರು ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ಸುಷ್ಮಾ ಸ್ವರಾಜ್ ಹಾಗೂ ಶೀಲಾ ದೀಕ್ಷಿತ್ ನಂತರ ಅತಿಶಿ ಅವರು ದೆಹಲಿ ಸಿಎಂ ಹುದ್ದೆಗೆ ಏರಿದ 3ನೇ ಮುಖ್ಯಮಂತ್ರಿಯಾಗಿದ್ದಾರೆ.
ಅರವಿಂದ್ ಕೇಜ್ರಿವಾಲ್ ರಾಜೀನಾಮೆ
ದೆಹಲಿಯಲ್ಲಿ ಪ್ರಸ್ತುತ ಎಎಪಿ ಪಕ್ಷದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಸಂಜೆ ಅಧಿಕೃತ ರಾಜೀನಾಮೆ ನೀಡಲಿದ್ದಾರೆ. ಕೇಜ್ರಿವಾಲ್ ರಾಜೀನಾಮೆ ಬಳಿಕ ಅತಿಶಿ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…