Six people dead madhyapradesh
ಬರ್ವಾನಿ: ಮಧ್ಯ ಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕೊಂದು ಹಾಕಿದೆ.
ನಿಗೂಢ ಪ್ರಾಣಿಯಿಂದ ಕಡಿತಕ್ಕೊಳಗಾದವರಿಗೆ ರೇಬಿಸ್ ಚುಚ್ಚುಮದ್ದನ್ನು ಚುಚ್ಚಲಾಯಿತು. ಆದರೂ ಯಾರೂ ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.
ಲಿಂಬೈ ಗ್ರಾಮದ 17 ಮಂದಿ ಮಲಗಿದ್ದರು, ಜನರು ಮಲಗಿದ್ದಾಗ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ ನಡೆಸಿದೆ. ಒಬ್ಬರು ಅಂಗಳ ಗುಡಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದೆ. ಬದುಕುಳಿದವರು ಆ ಪ್ರಾಣಿ ನಾಯಿಯಂತೆ ಕಾಣುತ್ತಿತ್ತು ಎಂದು ಹೇಳಿದ್ದಾರೆ.
ಬೊಗಳಲಿಲ್ಲ, ಗುರುಗುಟ್ಟಲೂ ಇಲ್ಲ ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಎಲ್ಲಾ 17 ಮಂದಿಗೆ ಬರ್ವಾನಿ ಮತ್ತು ಇಂದೋರ್‍ನ ವೈದ್ಯಕೀಯ ಕೇಂದ್ರಗಳಲ್ಲಿ ರೇಬೀಸ್ ವಿರೋಧಿ ಲಸಿಕೆ ನೀಡಲಾಯಿತು. ಆದರೆ ಮೇ.23 ಮತ್ತು ಜೂನ್.2ರ ನಡುವೆ ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯರು ಮತ್ತು 40 ರಿಂದ 60 ವರ್ಷ ವಯಸ್ಸಿನ ನಾಲ್ವರು ಪುರುಷರಾಗಿದ್ದಾರೆ.
ವೈದ್ಯರು ಹಿಂದೆಂದೂ ಈ ರೀತಿ ಕಚ್ಚಿರುವ ಗುರುತನ್ನು ನೋಡಿಯೇ ಇಲ್ಲ ಎಂದಿದ್ದಾರೆ. ಎಲ್ಲಾ ವೈದ್ಯಕೀಯ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಮತ್ತು ಲಸಿಕೆಯನ್ನು ಮಾರ್ಗಸೂಚಿಗಳ ಪ್ರಕಾರ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೃತರ ಮೆದುಳಿನ ಅಂಗಾಂಶ, ಗಂಟಲಿನ ಬಯಾಪ್ಸಿಯನ್ನು ವಿವರವಾದ ವಿಶ್ಲೇಷಣೆಗಾಗಿ ದೆಹಲಿಗೆ ಕಳುಹಿಸಲಾಗಿದೆ. ಅವರೆಲ್ಲರ ಸಾವಿಗೆ ರೇಬಿಸ್ ಚುಚ್ಚುಮದ್ದು ಕಾರಣವೇ ಅಥವಾ ಆ ಪ್ರಾಣಿ ಕಚ್ಚಿದ್ದು ಕಾರಣವೇ ಎಂಬುದು ತಿಳಿದುಬರಲಿದೆ. ಅರಣ್ಯ ಇಲಾಖೆಯು ಪ್ರಾಣಿಗಾಗಿ ನಡೆಸಿದ ಹುಡುಕಾಟದಲ್ಲಿ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಯಾವುದೇ ಹೆಜ್ಜೆಗುರುತುಗಳು, ದೃಶ್ಯಗಳು, ಭೌತಿಕ ಸುಳಿವುಗಳು ಇಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮದಿಂದ ಕಾಡು ಕೇವಲ 4.5 ಕಿ.ಮೀ ದೂರದಲ್ಲಿದೆ. ನೀವು ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ಅಂತಹ ಪ್ರಾಣಿಯನ್ನು ಹಿಡಿಯಲು ಸಾಧ್ಯವಿಲ್ಲ. ಡ್ರೋನ್‍ಗಳನ್ನು ಬಳಸಿ, ತಂಡಗಳ ಸಂಖ್ಯೆಯನ್ನು ಹೆಚ್ಚಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…