ದೇಶ- ವಿದೇಶ

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ ಮತ್ತೊಬ್ಬ ಭಾರತೀಯ ನಾಪತ್ತೆಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಸಂಘರ್ಷ ಪ್ರದೇಶದ ಸಮೀಪ ಸಾಗುತ್ತಿದ್ದ ವ್ಯಾಪಾರಿ ಹಡಗಿನ ಮೇಲೆ ದಾಳಿ ನಡೆದಿದ್ದು, ಅದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ನಾಗರಿಕರು ಕೂಡ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದು, ಮತ್ತೊಬ್ಬರನ್ನು ಇನ್ನೂ ಪತ್ತೆಹಚ್ಚಲಾಗಿಲ್ಲ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದ್ದು, ಸಂಬಂಧಿಸಿದ ದೇಶಗಳ ಅಧಿಕಾರಿಗಳೊಂದಿಗೆ ಭಾರತ ಸರ್ಕಾರ ಸಂಪರ್ಕದಲ್ಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ಸಚಿವಾಲಯವು, ಹಡಗಿನಲ್ಲಿ ಇದ್ದ ಇತರ ಭಾರತೀಯರ ಸುರಕ್ಷತೆ ಕುರಿತು ಮಾಹಿತಿ ಸಂಗ್ರಹಿಸುತ್ತಿದೆ. ಜೊತೆಗೆ, ನಾಪತ್ತೆಯಾಗಿರುವ ವ್ಯಕ್ತಿಯ ಪತ್ತೆಗಾಗಿ ಸಂಬಂಧಿಸಿದ ಸಂಸ್ಥೆಗಳು ಹಾಗೂ ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಇದೇ ವೇಳೆ ಕೊಲ್ಲಿ ರಾಷ್ಟ್ರಗಳು ಸೇರಿದಂತೆ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಾಸಿಸುವ ಭಾರತೀಯ ನಾಗರಿಕರ ಭದ್ರತೆ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಆ ಪ್ರದೇಶದಲ್ಲಿ ಇರುವ ಭಾರತೀಯರು ಎಚ್ಚರಿಕೆಯಿಂದ ಇರಲು ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆಗಳನ್ನು ಪಾಲಿಸಲು ಸರ್ಕಾರ ಸಲಹೆ ನೀಡಿದೆ.

ಪಶ್ಚಿಮ ಏಷ್ಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಹಿನ್ನೆಲೆಯಲ್ಲಿ ಸಮುದ್ರ ಮಾರ್ಗದಲ್ಲಿನ ವ್ಯಾಪಾರ ಹಡಗುಗಳ ಸುರಕ್ಷತೆ ಕುರಿತೂ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆ, ಭಾರತೀಯ ನೌಕಾಪಡೆ ಮತ್ತು ಸಂಬಂಧಿಸಿದ ಸಂಸ್ಥೆಗಳು ಪರಿಸ್ಥಿತಿಯನ್ನು ಗಮನದಿಂದ ವೀಕ್ಷಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

9 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

16 mins ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

32 mins ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

2 hours ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

3 hours ago