ದೇಶ- ವಿದೇಶ

ಸಿಜೆಐ ಮೇಲೆ ದಾಳಿ : ವಕೀಲ ರಾಕೇಶ್‌ ಕಿಶೋರ್‌ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ʻಎಜಿʼ ಒಪ್ಪಿಗೆ

ಹೊಸದಿಲ್ಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಎಸೆಯಲು ಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರನ್ನು ನ್ಯಾಯಾಂಗ ನಿಂದನೆ ಆರೋಪದಡಿ ವಿಚಾರಣೆಗೆ ಗುರಿಪಡಿಸಲು ಅಟಾರ್ನಿ ಜನರಲ್ ಗುರುವಾರ ಅನುಮತಿ ನೀಡಿದ್ದಾರೆ.

ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಸುಪ್ರೀಂ ಕೋರ್ಟ್‌ನ ವಕೀಲರ ಸಂಘದ ಮುಖ್ಯಸ್ಥ ವಿಕಾಸ್ ಸಿಂಗ್ ಅವರು ಕೋರಿದರು.

ಇದನ್ನೂ ಓದಿ:-ಮೋದಿಗೆ ಟ್ರಂಪ್ ಕಂಡರೆ ಭಯ : ರಾಹುಲ್ ಗಾಂಧಿ ಟೀಕೆ

ಅಕ್ಟೋಬರ್ ೬ರಂದು ನಡೆದ ಘಟನೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಭಿನ್ನ ರೀತಿಯ ಪ್ರತಿಕ್ರಿಯೆಗಳು ಬರುತ್ತಿವೆ. ಹೀಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯ ಪ್ರಕಟಣೆಗೆ ಪ್ರತಿಬಂಧಕಾಜ್ಞೆ ನೀಡುವಂತೆ ಮೆಹ್ತಾ ಮತ್ತು ಸಿಂಗ್ ಒತ್ತಾಯಿಸಿದರು.

ಮೂಲಭೂತ ಹಕ್ಕಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯವು ಇತರರ ಸಮಗ್ರತೆ ಮತ್ತು ಘನತೆಗೆ ಧಕ್ಕೆ ತರುವಂತೆ ಇರಬಾರದು ಎಂದು ಪೀಠ ಇದೇ ವೇಳೆ ತಿಳಿಸಿತು. ನ್ಯಾಯಾಂಗ ನಿಂದನೆ ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡಲು ನಿರಾಕರಿಸಿದ ಪೀಠವು, ‘ವಾರದ ಬಳಿಕ ನೋಡೊಣ’ ಎಂದು ಹೇಳಿತು.

ಆಂದೋಲನ ಡೆಸ್ಕ್

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

12 mins ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

22 mins ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

32 mins ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

49 mins ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

1 hour ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

1 hour ago