ದೇಶ- ವಿದೇಶ

ಸಂಸತ್‌ ಭವನದ ಮೇಲೆ ದಾಳಿ: ಹುತಾತ್ಮರಾದ ಯೋಧರಿಗೆ ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪ ನಮನ

ನವದೆಹಲಿ: 2001ರಲ್ಲಿ ಹಳೆ ಸಂಸತ್‌ ಮೇಲೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ.

ಹಳೆ ಸಂಸತ್‌ ಭವನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಸುಮಾರು 23 ವರ್ಷಗಳು ಕಳೆದಿವೆ. ಈ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು(ಡಿ.13) ಹಳೆ ಸಂಸತ್‌ ಭವನ ಹೊರಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪುಷ್ಪ ನಮನ ಮಾಡಿದ್ದಾರೆ.

ಈ ವೇಳೆ ಲೋಕಸಭೆಯ ಸಭಾಪತಿ ಓಂ ಬಿರ್ಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಸೇರಿದಂತೆ ಕೇಂದ್ರ ಸಚಿವರು ಮತ್ತು ಸಂಸದರು ಭಾಗವಹಿಸಿದ್ದರು. ಬಳಿಕ ಕೆಲ ಕಾಲ ಮೌನ ಆಚರಣೆ ಮಾಡಿ ಸಿಐಎಸ್‌ಎಫ್‌ ಸಿಬ್ಬಂದಿಯಿಂದ ಗೌರವ ಸಲ್ಲಿಸಲಾಯಿತು.

ಇನ್ನು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 2001ರಲ್ಲಿ ಸಂಸತ್ತಿನ ಮೇಲೆ ದಾಳಿ ನಡೆಯಿತು. ಆ ದಾಳಿಯಲ್ಲಿ ಯೋಧರು ತಮ್ಮ ಪ್ರಾಣವನ್ನು ತ್ಯಾಗಮಾಡಿ ಸಚಿವರು ಹಾಗೂ ಸಂಸದರನ್ನು ರಕ್ಷಣೆ ಮಾಡಿದ್ದಾರೆ. ಅವರ ಆ ತ್ಯಾಗ ನಮ್ಮ ರಾಷ್ಟ್ರಪ್ರೇಮವನ್ನು ಸದಾ ನೆನಪಿಸುತ್ತದೆ. ಹೀಗಾಗಿ ನಾವು ಅವರ ಧೈರ್ಯ ಹಾಗೂ ಸಮರ್ಪಣೆಗಾಗಿ ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

30 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

32 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

34 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago