ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್ ಮನೆ ತಲುಪಿದ್ದು ಹೇಗೆ? ದಾಳಿ ಹಿಂದೆ ಬೇರೆ ಯಾರಾದ್ದಾರೂ ಕೈವಾಡ ಇದೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಯು ಗುರುವಾರ ನಸುಕಿನ ಜಾವ ಸೈಫ್ ಮನೆಗೆ ನುಗ್ಗಿ, ಸೈಫ್ ಕಿರಿಯ ಪುತ್ರನ ಕೊಠಡಿಗೆ ತೆರಳಿ, ಒಂದು ಕೋಟಿ ಹಣ ನೀಡದಿದ್ದರೆ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ. ಈ ವೇಳೆ ಕೂಗಾಟ ಕೇಳಿ ಕೊಠಡಿಗೆ ಬಂದ ಸೈಫ್ ಮಗನ ರಕ್ಷಣೆಗೆ ಮುಂದಾಗಿದ್ದು, ಆವಾಗ ಆರೋಪಿ ಸೈಫ್ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದ. ಘಟನೆಯಲ್ಲಿ ಸೈಫ್ ಅಲಿಖಾನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬೈನ ಪೊಲೀಸರು ಘಟನೆಯ ಬಗ್ಗೆ ತಿಳಿದು, ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಆರೋಪಿಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಫೋಟೊವನ್ನು ಬಿಡುಗಡೆ ಮಾಡಿದ್ದರು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…