ಶ್ರೀನಗರ : ಜಮ್ಮು ಮತ್ತು ಕಾಶ್ಮಿರದ ಅಖ್ನೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದು, ಸೇನೆ ನಡೆಸಿದ ಕಾರ್ಯಾಚಾರಣೆಯಲ್ಲಿ ಮೂವರು ಉಗ್ರರನ್ನು ಸೆದೆಬಡಿಯಲಾಗಿದೆ.
ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ ಚಂದ್ ಎಂದು ಗುರ್ತಿಸಲಾಗಿದೆ. ಇನ್ನು ಹತರಾದ ಉಗ್ರರ ಪೈಕಿ ಓರ್ವ ಜೈಶ್-ಎ-ಮೊಹಮ್ಮದ್‍ನ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಈತ ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದನು. ಸೈಫುಲ್ಲಾ ಜೈಶ್-ಎ-ಮೊಹಮ್ಮದ್‍ನ ಕಮಾಂಡರ್ ಆಗಿದ್ದು, ಕಿಶ್ತ್ವಾರ್ ಪ್ರದೇಶದಲ್ಲಿ ಈತ ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ, ಈತನ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ತಿಳಿದು ಕಾರ್ಯಾಚರಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಿಶ್ತ್ವಾರ್ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿತ್ತು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…