Mysore
22
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್‌ ಪರೀಕ್ಷೆ ಅಕ್ರಮ ಹಾಗೂ ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್‌ ಬಲಪ್ರಯೋಗದ ವಿಷಯದಲ್ಲಿ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಂತರ್‌ ಮಂತರ್‌ನಲ್ಲಿ ಶಾಂತಿಯುತವಾಗಿ ಚಲೋ ಸಂಸತ್‌ ಮೆರವಣಿಗೆಗೆ ಯತ್ನಿಸುತ್ತಿದ್ದ ನೀಟ್‌ ಅಭ್ಯರ್ಥಿಗಳು, ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ದೆಹಲಿ ಪೊಲೀಸರು ಬಲಪ್ರಯೋಗ ಹಾಗೂ ಲಾಠಿಚಾರ್ಜ್‌ ನಡೆಸಿರುವುದನ್ನು ಖರ್ಗೆ ಕಠಿಣವಾಗಿ ಖಂಡಿಸಿದರು.

ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಪೊಲೀಸ್‌ ಶಕ್ತಿಯನ್ನು ಬಳಸುತ್ತಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ವರ್ತನೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

 

Tags:
error: Content is protected !!