Mysore
29
clear sky

Social Media

ಗುರುವಾರ, 29 ಅಕ್ಟೋಬರ್ 2026
Light
Dark

ರೈಲು ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್‌ ಚಾರ್ಜಿಂಗ್‌ ಬಂದ್‌!

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ.

ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ರೈಲುಗಳಲ್ಲಿನ ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಸ್ವಿಚ್‌ ಆಫ್‌ ಮಾಡುವಂತೆ ರೈಲ್ವೆ ಮಂಡಳಿ ಸೂಚಿಸಿದೆ ಎಂದು ವರದಿಯಾಗಿದೆ.

ಮೊಬೈಲ್‌ ಚಾರ್ಜಿಂಗ್‌ ವೇಳೆ ಪವರ್‌ ಬ್ಯಾಂಕ್‌ ಸ್ಫೋಟಗೊಂಡ ಘಟನೆ ಹಿನ್ನೆಲೆಯಲ್ಲಿ, ಪ್ರಯಾಣಿಕರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಎಲ್ಲ ರೈಲ್ವೆ ವಲಯಗಳಲ್ಲೂ ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ರಾತ್ರಿ ಆರು ಗಂಟೆಗಳ ಕಾಲ ಚಾರ್ಜಿಂಗ್‌ ಪಾಯಿಂಟ್‌ಗಳು ಸ್ಥಗಿತಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.

ನಿಯಮ ಪಾಲನೆಯಲ್ಲಿ ಯಾವುದೇ ವಿನಾಯಿತಿ ಇಲ್ಲದಿದ್ದು, ನಿರಂತರ ತಪಾಸಣೆ ಮತ್ತು ಮೇಲ್ವಿಚಾರಣೆಗೂ ನಿರ್ದೇಶನ ನೀಡಲಾಗಿದೆ ಎಂದು ವರದಿ ತಿಳಿಸಿದೆ.

Tags:
error: Content is protected !!