Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ: ತಂದೆ ಪ್ರವೀಣ್‌ ಕುಮಾರ್‌ ಶಪಥ

ಸಮಸ್ತಿಪುರ(ಬಿಹಾರ): ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ತಂದೆ ಪ್ರವೀಣ್‌ ಕುಮಾರ್‌ ಶಪಥ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಡಿಸೆಂಬರ್‌ 9 ರಂದು ಅತುಲ್‌ ಸುಭಾಷ್‌(34) ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುಂಚೆ 90 ನಿಮಿಷಗಳ ವಿಡಿಯೋ ಹಾಗೂ ಸುದೀರ್ಘವಾದ ಆತ್ಮಹತ್ಯೆಗೆ ಸಂಬಂಧಿಸಿದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಅಲ್ಲದೇ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ನನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ನನ್ನ ಮಗನ ಸಾವಿಗೆ ಕಾರಣರಾದವರನ್ನು ಬಂಧಿಸಿದ್ದಕ್ಕೆ ಕರ್ನಾಟಕ ರಾಜ್ಯ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ ನನ್ನ ಮಗನಿಗೆ ಕಿರಕುಳ ನೀಡಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ನನ್ನ ಮಗನ ಆತ್ಮಕ್ಕೆ ಶಾಂತಿಯಾಗುತ್ತೆ. ಬದುಕಿದ್ದಾಗಲೂ ನನ್ನ ಮಗ ದಿನೇ ದಿನೇ ಸಾಯುತ್ತಿದ್ದನು. ಇಷ್ಟೆಲ್ಲಾ ಚಿತ್ರಹಿಂಸೆ ಅನುಭವಿಸುತ್ತಿದ್ದರೂ ಕೂಡ ನನ್ನ ಮಗ ಯಾರಲ್ಲಿಯೂ ಹೇಳಿಕೊಂಡಿರಲಿಲ್ಲ. ತನ್ನ ಮಗನನ್ನು ತಮಗೆ ಒಪ್ಪಿಸಬೇಕೆಂದು ಆತ್ಮಹತ್ಯೆ ಪತ್ರದಲ್ಲಿ ಆತ ಸ್ಪಷ್ಟವಾಗಿ ಹೇಳಿದ್ದಾನೆ. ಹೀಗಾಗಿ ನ್ಯಾಯ ಸಿಗುವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Tags: