ಅಯೋಧ್ಯೆ: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಜೂನ್.5ರೊಳಗೆ ಪೂರ್ಣಗೊಳ್ಳಲಿದೆ.
ಜೂನ್.5ರಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗುವುದು.
ಇನ್ನು ವಿಶೇಷವೆಂದರೆ ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕೀಯ ನಾಯಕರು, ಕೇಂದ್ರ ಅಥವಾ ರಾಜ್ಯ ಸರ್ಕಾರದ ಸಚಿವರು ಅಥವಾ ಅಧಿಕಾರಿಗಳನ್ನು ಆಹ್ವಾನಿಸುವುದಿಲ್ಲ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಾಹಿತಿ ನೀಡಿದ್ದಾರೆ.
ದೇವಾಲಯದ ಹೊಸದಾಗಿ ಪೂರ್ಣಗೊಂಡ ಭಾಗವನ್ನು ಸಮಾರಂಭದ ನಂತರ ಒಂದು ವಾರದೊಳಗೆ ಸಾರ್ವಜನಿಕರಿಗೆ ತೆರೆಯಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.





