ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್.24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.
ನವೆಂಬರ್.25ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ.
ಇದನ್ನು ಓದಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 25 ಅಡಿ ಎತ್ತರದ ರಾವಣನ ಪ್ರತಿಮೆ
ಈ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಾಣ ಪ್ರತಿಷ್ಠೆಗೆ ದೇಶದಾದ್ಯಂತ ಜನರನ್ನು ಆಹ್ವಾನಿಸಲಾಗಿದ್ದರೂ ಈ ಬಾರಿ ಧ್ವಜಾರೋಹಣ ಸಮಾರಂಭಕ್ಕೆ ಪೂರ್ವ ಉತ್ತರ ಪ್ರದೇಶಕ್ಕೆ ಆದ್ಯತೆ ನೀಡಲಾಗಿದೆ. ದೇವಾಲಯ ಸಂಕೀರ್ಣದ ಒಳಗೆ ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿದ್ದು, ಆಸನ ಸಾಮರ್ಥ್ಯವನ್ನು ಕಡಿಮೆ ಮಾಡಲಾಗಿದೆ.
ಆದ್ದರಿಂದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಹ್ವಾನಿತರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.





