ದೇಶ- ವಿದೇಶ

2 ದಿನ ಇರಲ್ಲ ಅಯೋಧ್ಯೆ ಶ್ರೀರಾಮನ ದರ್ಶನ: ಕಾರಣ ಇಷ್ಟೆ.!

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್.‌24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.

ನವೆಂಬರ್.‌25ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ.

ಇದನ್ನು ಓದಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 25 ಅಡಿ ಎತ್ತರದ ರಾವಣನ ಪ್ರತಿಮೆ

ಈ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಾಣ ಪ್ರತಿಷ್ಠೆಗೆ ದೇಶದಾದ್ಯಂತ ಜನರನ್ನು ಆಹ್ವಾನಿಸಲಾಗಿದ್ದರೂ ಈ ಬಾರಿ ಧ್ವಜಾರೋಹಣ ಸಮಾರಂಭಕ್ಕೆ ಪೂರ್ವ ಉತ್ತರ ಪ್ರದೇಶಕ್ಕೆ ಆದ್ಯತೆ ನೀಡಲಾಗಿದೆ. ದೇವಾಲಯ ಸಂಕೀರ್ಣದ ಒಳಗೆ ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿದ್ದು, ಆಸನ ಸಾಮರ್ಥ್ಯವನ್ನು ಕಡಿಮೆ ಮಾಡಲಾಗಿದೆ.

ಆದ್ದರಿಂದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಹ್ವಾನಿತರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

6 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago