Mysore
19
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಅಮಿತ್‌ ಶಾರವರ ಆತ್ಮವಿಶ್ವಾಸದ ಛಲ ನನ್ನ ಪಕ್ಷದ ಪ್ರೇರಣೆಗೆ ಶಕ್ತಿ: ವಿಜಯೇಂದ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್‌ ಶಾ
ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಬುಧವಾರ(ಜ.1) ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ಇದೇ ವೇಳೆ ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು ಎಂದು ಹೇಳಿದ್ದಾರೆ.

ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಅಮಿತ್ ಶಾ ರವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹ ತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags:
error: Content is protected !!