ದೇಶ- ವಿದೇಶ

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಫೋಟದ ಬಳಿಕ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ. ಪಾಕಿಸ್ತಾನ ಮಿಲಿಟರಿ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ಇದಾಗಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ಹೇಳಿದೆ. ಸ್ಫೋಟದ ಬಳಿಕ ಸ್ಥಳದಲ್ಲಿ ಭಾರೀ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಾಂಬ್ ಸ್ಫೋಟದ ಪರಿಣಾಮ ರೈಲ್ವೆ ಟ್ರ್ಯಾಕ್ ಬಳಿಯ ಮನೆಗಳಲ್ಲಿ ಪಾರ್ಕ್ ಮಾಡಿದ್ದ ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೇ ಮನೆಗಳ ಕಿಟಕಿಗಳು ಪುಡಿಯಾಗಿದೆ.

ರೈಲು ಕಂಟೋನ್ಮೆಂಟ್‌ನಿಂದ ತೆರಳುತ್ತಿದ್ದ ವೇಳೆ ಬಲೂಚಿಸ್ತಾನ ಪ್ರದೇಶದ ಕ್ವೆಟ್ಟಾದ ಚೆಮನ್ ಫಾಟಕ್ ಬಳಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು, ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago