ಮುಂಬೈ: ರಷ್ಯನ್ ಭಾಷೆಯಲ್ಲಿ ಆರ್‌ಬಿಐ ಕಚೇರಿಗೆ ಬಾಂಬ್ ಬೆದರಿಕೆ ಕರೆ ಪತ್ರದ ಮೂಲಕ ರವಾನೆಯಾಗಿದ್ದು, ಈ ಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಕೇಂದ್ರ ಕಚೇರಿಯ ಅಧಿಕೃತ ವೆಬ್‌ಸೈಟ್‌ಗೆ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ಮುಂಬೈನ ಮಾತಾ ರಾಮಾ ಬಾಯಿ ಮಾರ್ಗ ಪೊಲೀಸ್ ಠಾಣೆಯ ಪೊಲೀಸರು ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ. ದೂರಿನ ಆಧಾರದ ಮೇರೆಗೆ ಬೆದರಿಕೆ ಕಳುಹಿಸಿದವನ ಆರೋಪಿ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ನವೆಂಬರ್ 16 ರಂದು ಆರ್‌ಬಿಐನ ಗ್ರಾಹಕ ಸೇವಾ ಸಂಖ್ಯೆಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈ ಕರೆ ಮಾಡಿದವನು ಲಷ್ಕರ್-ಎ-ತಯಬಾ ಸಂಘಟನೆಯ ಸಿಇಒ ಎಂದು ಗುರುತಿಸಿಕೊಂಡಿದ್ದಾರೆ. ಆದರೆ ಇದೀಗ ಮತ್ತೊಮ್ಮೆ ಪತ್ರದ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.





