ದೇಶ- ವಿದೇಶ

ಬೆಂಗಳೂರು ಅರಮನೆ ಮೈದಾನ ; ಟಿಡಿಆರ್‌ ಠೇವಣಿಗೆ ಸರ್ಕಾರಕ್ಕೆ ತಾಕೀತು ಮಾಡಿದ ಸುಪ್ರೀಂ

ಹೊಸದಿಲ್ಲಿ: ಬೆಂಗಳೂರಿನ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಪಟ್ಟಂತೆ 3,400ಕೋಟಿಗೂ ಹೆಚ್ಚಿನ ವರ್ಗಾವಣೆ ಮಾಡಬಹುದಾದ ಟಿಡಿಆರ್‌ ಪ್ರಮಾಣಪತ್ರಗಳನ್ನು ಒಂದು ವಾರದೊಳಗೆ ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಕರ್ನಾಟಕ್ಕೆ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ಗುರುವಾರ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿರುವ ಪೀಠವು, ಸರ್ಕಾರದ ನಿಲುವು ಏಕರೂಪವಾಗಿಲ್ಲ. ಸರ್ಕಾರ ಆಗಾಗ ನಿಲುವನ್ನು ಬದಲಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ವಾದ-ವಿವಾದ ಆಲಿಸಿದ ಪೀಠವು, ನಾವು ಎಲ್ಲಾ ವಿಷಯವನ್ನು ಪರಿಗಣಿಸುತ್ತೇವೆ ಎಂದು ವಿಚಾರಣೆಯನ್ನು ಮಾರ್ಚ್‌ 20ಕ್ಕೆ ಮುಂದೂಡಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

5 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago