court
ನವದೆಹಲಿ: ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಸುಮಾರು 3,400 ಕೋಟಿ ರೂ ಅಭಿವೃದ್ಧಿ ಹಕ್ಕು ಪ್ರಮಾಣಪತ್ರ ಹಾಗೂ ಟಿಡಿಆರ್ ಸರ್ಟಿಫಿಕೇಟ್ ಅನ್ನು ರಾಜಮನೆತನಕ್ಕೆ ಹಸ್ತಾಂತರ ಮಾಡಬೇಕೆಂದು ಈ ಹಿಂದೆ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಬಗ್ಗೆ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದ್ದು, ಮರುಪರಿಶೀಲನಾ ಅರ್ಜಿಯ ಮುಂದಿನ ವಿಚಾರಣೆಯನ್ನು ಜುಲೈ.21ಕ್ಕೆ ಹಾಗೂ ಮುಖ್ಯ ಸಿವಿಲ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್.18ಕ್ಕೆ ನಿಗದಿಪಡಿಸಿದೆ.
ಬೆಂಗಳೂರು ಅರಮನೆ ಮೈದಾನದ ಬಳಿ ರಸ್ತೆ ಅಗಲೀಕರಣಕ್ಕಾಗಿ ಒಟ್ಟು 15.36 ಎಕರೆ ಜಮೀನು ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಇದರ ವಿರುದ್ಧ ರಾಜಮನೆತನದವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಎಕರೆಗೆ 200 ಕೋಟಿ ರೂಪಾಯಿಯಂತೆ 3400 ಕೋಟಿ ರೂ ಟಿಡಿಆರ್ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.
ಆದರೆ ಟಿಡಿಆರ್ ನೀಡಲು ಒಪ್ಪದ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿತ್ತು. ಹೀಗಾಗಿ ಸುಗ್ರೀವಾಜ್ಞೆ ಮತ್ತು ಪರಿಹಾರ ನೀಡದ್ದಕ್ಕೆ ರಾಜಮನೆತನ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮೇ.22ರಂದು ಟಿಡಿಆರ್ ಪಾವತಿ ಮಾಡುವಂತೆ ಆದೇಶ ನೀಡಿತ್ತು. ಆ ಆದೇಶ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…