ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಖಲೀದಾ ಜಿಯಾ ಅವರನ್ನು ನವೆಂಬರ್.23ರಂದು ಡಾಕಾದ ಎವರ್‌ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಕಾಯಿಲೆ, ಮಧುಮೇಹ, ಸಂಧಿವಾತ, ಲಿವರ್ ಸಿರೋಸಿಸ್ ಹಾಗೂ ಮೂತ್ರಪಿಂಡದ ತೊಂದರೆಗಳು ಸೇರಿದಂತೆ ಹಲವು ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಈ ತಿಂಗಳ ಆರಂಭದಲ್ಲಿ ಸುಧಾರಿತ ವೈದ್ಯಕೀಯ ಚಿಕಿತ್ಸೆಗಾಗಿ ಲಂಡನ್‌ಗೆ ಕಳುಹಿಸಲಾಗಿತ್ತು.
ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬ ಹಾಗೂ ಬಾಂಗ್ಲಾದೇಶದ ಎಲ್ಲಾ ಜನರಿಗೆ ನಮ್ಮ ಸಂತಾಪಗಳು. ಈ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಸಂತಾಪ ಸೂಚಿಸಿದರು.





