ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.
ಶೇಖ್ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹಿಂಸಾಚಾರದಿಂದ ಮೊಬೈಲ್ ಇಂಟರ್ನೆಟ್ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…