Mysore
25
haze

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಬಾಂಗ್ಲಾದೇಶ ಹಿಂಸಾಚಾರಕ್ಕೆ ಅಮೆರಿಕಾ ಕಾರಣ: ಶೇಖ್‌ ಹಸೀನಾ ಸುಳಿವು

ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್‌ ಹಸೀನಾ ಅವರು, ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನಗಳಿಗೆ ಅಮೆರಿಕಾ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಮೆರಿಕಾದವರು ಬಾಂಗ್ಲಾದೇಶದಲ್ಲಿ ಅಧಿಕಾರ ಕಿತ್ತುಕೊಳ್ಳಲು ಬಯಸಿದ್ದರು. ಹೀಗಾಗಿ ವಿದ್ಯಾರ್ಥಿಗಳೆಲ್ಲಾ ಮೀಸಲಾತಿ ಹೆಸರಲ್ಲಿ ಹಿಂಸಾತ್ಮಕ ಹೋರಾಟ ನಡೆಸುತ್ತಿದ್ದಾರೆ. ನಾನು ರಾಜೀನಾಮೆ ನೀಡಲ್ಲ ಎಂದು ಪದೇ ಪದೇ ಹೇಳುತ್ತಿದ್ದೆ. ಆದರೆ ಹಿಂಸಾಚಾರ ನಿಲ್ಲದ ಪರಿಣಾಮ ನಾನು ಶಾಂತಿ ಕಾಪಾಡಲೆಂದು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ಅಮೆರಿಕಾ ಬಂಗಾಳಕೊಲ್ಲಿಯಲ್ಲಿ ತನ್ನ ಅಸ್ತಿತ್ವ ಸ್ಥಾಪನೆ ಮಾಡಲು ಬಯಸಿತ್ತು. ನಾನು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಅಮೆರಿಕಾ ತನ್ನ ಬೇಳೆ ಬೇಯಿಸಿಕೊಂಡಿದೆ. ನನ್ನ ದೇಶದ ಜನರು ಮೂಲಭೂತವಾದಿಗಳ ಸಂಚಿಗೆ ಬಲಿಯಾಗಬಾರದು ಎಂದು ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸಲು ಮುಗ್ಧ ಜನರನ್ನು ಬಳಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಮಾತಿನುದ್ದಕ್ಕೂ ಅಮೆರಿಕಾದ ಮೇಲೆ ಗಂಭೀರ ಆರೋಪ ಮಾಡಿದರು.

Tags:
error: Content is protected !!