ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್ ಹಸೀನಾ ಅವರು, ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನಗಳಿಗೆ ಅಮೆರಿಕಾ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಮೆರಿಕಾದವರು ಬಾಂಗ್ಲಾದೇಶದಲ್ಲಿ ಅಧಿಕಾರ ಕಿತ್ತುಕೊಳ್ಳಲು ಬಯಸಿದ್ದರು. ಹೀಗಾಗಿ ವಿದ್ಯಾರ್ಥಿಗಳೆಲ್ಲಾ ಮೀಸಲಾತಿ ಹೆಸರಲ್ಲಿ ಹಿಂಸಾತ್ಮಕ ಹೋರಾಟ ನಡೆಸುತ್ತಿದ್ದಾರೆ. ನಾನು ರಾಜೀನಾಮೆ ನೀಡಲ್ಲ ಎಂದು ಪದೇ ಪದೇ ಹೇಳುತ್ತಿದ್ದೆ. ಆದರೆ ಹಿಂಸಾಚಾರ ನಿಲ್ಲದ ಪರಿಣಾಮ ನಾನು ಶಾಂತಿ ಕಾಪಾಡಲೆಂದು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ಅಮೆರಿಕಾ ಬಂಗಾಳಕೊಲ್ಲಿಯಲ್ಲಿ ತನ್ನ ಅಸ್ತಿತ್ವ ಸ್ಥಾಪನೆ ಮಾಡಲು ಬಯಸಿತ್ತು. ನಾನು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಅಮೆರಿಕಾ ತನ್ನ ಬೇಳೆ ಬೇಯಿಸಿಕೊಂಡಿದೆ. ನನ್ನ ದೇಶದ ಜನರು ಮೂಲಭೂತವಾದಿಗಳ ಸಂಚಿಗೆ ಬಲಿಯಾಗಬಾರದು ಎಂದು ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸಲು ಮುಗ್ಧ ಜನರನ್ನು ಬಳಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಮಾತಿನುದ್ದಕ್ಕೂ ಅಮೆರಿಕಾದ ಮೇಲೆ ಗಂಭೀರ ಆರೋಪ ಮಾಡಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…