Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಬೂಕರ್‌ ಪ್ರಶಸ್ತಿ

international booker award

ಲಂಡನ್‌ : ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಂತಾಗಿದೆ.

ಪ್ರಶಸ್ತಿಯು 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು.

ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಮುಷ್ತಾಕ್‌, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ.

Tags:
error: Content is protected !!