international booker award
ಲಂಡನ್ : ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಂತಾಗಿದೆ.
ಪ್ರಶಸ್ತಿಯು 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.
1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು.
ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…