ನವದೆಹಲಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಹಗರಣ ಮತ್ತು ಹನಿಟ್ರ್ಯಾಪ್‌ಗೆ ಕುಖ್ಯಾತಿ ಪಡೆದಿದೆ. ಇದರಿಂದ ಕರ್ನಾಟಕದ ಗೌರವವನ್ನು ಕಡಿಮೆ ಮಾಡಿದೆ ಎಂದು ಬಹಳ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರದಿಂದ ರಾಜ್ಯದ ಲಾಲಸ್ಯ ನೈತಿಕತೆಯನ್ನು ಅಧೋಗತಿಗೆ ತೆಗೆದುಕೊಂಡಿದೆ. ಒಂದು ಹಗರಣದಿಂದ ಇನ್ನೊಂದು ಹಗರಣ ಆಗುತ್ತಿದೆ. ಒಟ್ಟಾರೆ ಎರಡು ವರ್ಷದಲ್ಲಿ ಹತ್ತು ಹಗರಣಗಳು ಹೊರಗೆ ಬಂದಿವೆ. ಅಲ್ಲದೇ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಕೈ ಹಾಕಿದ ಕಡೆಯಲ್ಲ ಹಗರಣ ಹೊರ ಬರುತ್ತಿವೆ ಎಂದು ಹೇಳಿದರು.
ಕರ್ನಾಟಕ ವಿಧಾನಸಭೆಯಲ್ಲಿ ನೈತಿಕತೆ ಅಧಿಪತನವಾಗಿದ್ದು, ಮೊದಲು ಮನಿ ಕ್ರೈಸಿಸ್‌ನಿಂದ ಕೂಡಿತ್ತು. ಆದರೆ ಇದೀಗ ಹನಿಟ್ರ್ಯಾಪ್ ಕ್ರೈಸಿಸ್ ಆರಂಭವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ಮತ್ತು ನೈತಿಕವಾಗಿ ದಿವಾಳಿಯಾಗಿದೆ. ಅಲ್ಲದೇ ಕ್ಯಾಬಿನೆಟ್ ಸಚಿವರು ಹನಿಟ್ರ್ಯಾಪ್‌ಆಗುತ್ತಿದೆ ಎಂದು ಹೇಳುವ ಪರಿಸ್ಥಿತಿ ಬಂದಿದೆ. ಹದಿನೈದು ದಿನದಿಂದ ವಿಧಾನಸೌಧದ ಮೊಗಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇಂತಹ ಕ್ಯಾಬಿನೆಟ್‌ಗೆ ಏನು ಹೇಳಬೇಕು. ಇದೊಂದು ನೈತಿಕತೆ ಕಳೆದುಕೊಂಡ ಕ್ರಿಮಿನಲ್ ಕ್ಯಾಬಿನೆಟ್. ಸಿಎಂ ಸಿದ್ದರಾಮಯ್ಯನವರು ನೈತಕತೆ ಹೊತ್ತು ತಮ್ಮ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಸಚಿವ ಕೆ.ಎನ್.ರಾಜಣ್ಣ ಅವರು ಒಟ್ಟು 48 ಜನರ ಸಿಡಿ ಇದೆ ಎಂದಿದ್ದಾರೆ. ಅವರಗೆ ಮಾಹಿತಿ ಇದ್ದರೆ ಅವರು ಯಾರ ಯಾರದ್ದೂ ಎಂಬುದರ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಬೇಕು. ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ತನಿಖೆಯಾಗಬೇಕು. ಇದನ್ನು ಯಾರೇ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಈಗ ಎಸ್‌ಐಟಿಗಳಿಗೆ ಮಹತ್ವವಿಲ್ಲ. ಹೀಗಾಗಿ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…