ದೇಶ- ವಿದೇಶ

ಒಂದು ದೇಶ, ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ

ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಬಹಳ ಪ್ರಮುಖವಾದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಸಾಧ್ಯವಾಗುವುದಿಲ್ಲ. ನಮ್ಮ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯಿತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಿರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ. ಅಲ್ಲದೇ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರಲಿದ್ದು, ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯವಾಗಿದೆ. ನಮ್ಮ ದೇಶದ ಚುನಾವಣೆ ವ್ಯವಸ್ಥೆಯನ್ನು ಬಿಟ್ಟರೆ ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಹೀಗಾಗಿ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿರುವ ಕಾರಣ ಮೋದಿಯವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮವಾಗಿದೆ ಎಂದಿದ್ದಾರೆ.

ಈ ನಿರ್ಧಾರದಿಂದ ದೇಶಕ್ಕೆ ಒಳ್ಳೆಯದಾಗುವಂತಹ ಸೂಚನೆ ದೊರೆತಿದ್ದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚಿಸಿ ಸ್ವಾಗತ ಮಾಡಬೇಕು. ಅಲ್ಲದೇ ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

4 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

5 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

5 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

5 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

5 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

5 hours ago