ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಅರ್ಧಕ್ಕೆ ಎದ್ದು ಬಂದಿದ್ದಾರೆ. ಸಭೆಯಲ್ಲಿ ಮೈಕ್ ಆಫ್ ಮಾಡುವ ಮೂಲಕ ಮಾತನಾಡದಂತೆ ತಡೆಹಿಡಿಯಲಾಯಿತು ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.
ಈ ಬಾರಿ ಮಂಡಿಸಿದ ಬಜೆಟ್‌ನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರವಿರುವ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಹಲವು ಪ್ರತಿಪಕ್ಷಗಳ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿರಲಿಲ್ಲ. ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡುವಾಗ ಮೈಕ್ ಆಫ್ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ಸಭೆಯಿಂದ ಎದ್ದು ಹೊರ ಬಂದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎಲ್ಲಾ ರಾಜ್ಯದ ಸಿಎಂಗಳಿಗೂ ಮಾತನಾಡಲು 20 ನಿಮಿಷ ನೀಡಲಾಯಿತು. ಆದರೆ ನಾನು ಕೇವಲ ಐದು ನಿಮಿಷಗಳ ನಂತರ ಮಾತನಾಡದಂತೆ ತಡೆಯಲಾಯಿತು ಎಂದು ಆರೋಪಿಸಿದರು. ಸಭೆಯಲ್ಲಿ ನನ್ನ ಮಾತನ್ನು ತಡೆದು ಬಂಗಾಳ ಮತ್ತು ಎಲ್ಲಾ ಪ್ರಾದೇಶಿಕ ಪಕ್ಷಗಳಿಗೆ ಅಪಮಾನ ಮಾಡಲಾಗಿದೆ. ಈ ಮೂಲಕ ತಾರತಮ್ಯ ಮಾಡುವುದು ಮತ್ತೆ ಸಾಬೀತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನೂ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆದಿದ್ದು, 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕಡೆಗೆ ಸಭೆಯಲ್ಲಿ ಒತ್ತು ನೀಡಲಾಯಿತು.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…