ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಈಗಾಗಲೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಈಗಾಗಲೇ ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿ ಈ ಬಗ್ಗೆ ಚರ್ಚೆ ನಡೆಸಿದೆ. ಬೆಂಗಳೂರು ನಗರಕ್ಕೆ, ಅದರಲ್ಲಿಯೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ಈ ನಿಟ್ಟಿನಲ್ಲಿ ಕೇಂದ್ರವು ಕರ್ನಾಟಕದಲ್ಲಿ ಮತ್ತೊಂದಯ ವಿಮಾನ ನಿಲ್ದಾಣವನ್ನು ನಿರ್ಮಿಸುವ ಬಗ್ಗೆ ಗಮನ ಹರಿಸಬೇಕು. ಕರ್ನಾಟಕಕ್ಕೆ ಸಂಬಂಧಿಸಿ ನಾನು ಮಂಜೂರು ಮಾಡಿದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಈಗ ಪ್ರಯಾಣಿಕರ ದಟ್ಟಣೆಯಿಂದ ವಿಪರೀತ ಒತ್ತಡ ಎದುರಿಸುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಇನ್ನೂ ಒಂದು ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಹೇಳಿದರು.
ಇನ್ನು ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಅಗತ್ಯವಿದೆ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾತಿಗೆ ವಿಮಾನಯಾನ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಮ್ಮತಿ ಸೂಚಿಸಿದರು.
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…