ನವದೆಹಲಿ: ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸುರೇಶ್ ರೈನಾ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.
ಅಕ್ರಮ ಬೆಟ್ಟಿಂಗ್ ಆಪ್‌ಗಳು ಮತ್ತು ಫ್ಲಾಟ್‌ಫಾರ್ಮ್‌ಗಳ ಮೇಲಿನ ವ್ಯಾಪಕ ಕ್ರಮದ ಭಾಗವಾಗಿ ಈ ಸಮನ್ಸ್ ಬಂದಿದೆ.
ಮೇ ತಿಂಗಳಿನಲ್ಲಿ ತೆಲಂಗಾಣ ಪೊಲೀಸರು ರಾಣಾ ದಗ್ಗುಬಾಟಿ ಮತ್ತು ಪ್ರಕಾಶ್ ರಾಜ್ ಸೇರಿದಂತೆ 25 ಜನಪ್ರಿಯ ನಟರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಸೋಮವಾರ ನಟ ರಾಣಾ ದಗ್ಗುಬಾಟಿ ಆನ್‌ಲೈನ್ ಬೆಟ್ಟಿಂಗ್ ವೇದಿಕೆಗಳ ಅಕ್ರಮ ಪ್ರಚಾರದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.





