ದೇಶ- ವಿದೇಶ

ಬೆಟ್ಟಿಂಗ್‌ ಆಪ್‌ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ

ನವದೆಹಲಿ: ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸುರೇಶ್‌ ರೈನಾಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಸುರೇಶ್‌ ರೈನಾ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.

ಅಕ್ರಮ ಬೆಟ್ಟಿಂಗ್‌ ಆಪ್‌ಗಳು ಮತ್ತು ಫ್ಲಾಟ್‌ಫಾರ್ಮ್‌ಗಳ ಮೇಲಿನ ವ್ಯಾಪಕ ಕ್ರಮದ ಭಾಗವಾಗಿ ಈ ಸಮನ್ಸ್‌ ಬಂದಿದೆ.

ಮೇ ತಿಂಗಳಿನಲ್ಲಿ ತೆಲಂಗಾಣ ಪೊಲೀಸರು ರಾಣಾ ದಗ್ಗುಬಾಟಿ ಮತ್ತು ಪ್ರಕಾಶ್‌ ರಾಜ್‌ ಸೇರಿದಂತೆ 25 ಜನಪ್ರಿಯ ನಟರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಸೋಮವಾರ ನಟ ರಾಣಾ ದಗ್ಗುಬಾಟಿ ಆನ್‌ಲೈನ್‌ ಬೆಟ್ಟಿಂಗ್‌ ವೇದಿಕೆಗಳ ಅಕ್ರಮ ಪ್ರಚಾರದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.

ಆಂದೋಲನ ಡೆಸ್ಕ್

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago