ನವದೆಹಲಿ: ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಖಂಡಿಸಿ ಹಾಗೂ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಇಂದು(ಆ.21)ಭಾರತ್ ಬಂದೆಗೆ ಕರೆ ನೀಡಿದೆ. ಈ ಬಂದ್‌ಗೆ ದೇಶದ ಹಲವು ಸಂಘಟನೆಗಳು ಬೆಂಬಲ ವ್ಯಕ್ತವಾಗಿದೆ.
ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಾಕ್ತವಾಗುವ ಸಾಧ್ಯತೆ ಇರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ. ಉದ್ಯಮ ಸಂಸ್ಥೆಗಳು ಸಹ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಭಾರತ್ ಬಂದ್ ಗೆ ಬೆಂಬಲ ನೀಡುತ್ತೀವೆ.
ದೇಶದ ಹಲವಾರು ಎಸ್‌ಸಿ ಎಸ್‌ಟಿ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದೆ. ಮೆಡಿಕಲ್, ಅಗತ್ಯ ವೈದ್ಯಕೀಯ ಸೇವೆಗಳು, ಬ್ಯಾಂಕ್‌ಗಳು ಹಾಗೂ ಶಾಲಾ ಕಾಲೇಜುಗಳು ಸಾಮಾನ್ಯವಾಗಿ ಕಾರ್ಯ ನಿರ್ವಹಿಸಲಿವೆ.
ರಾಜ್ಯದಲ್ಲಿ ಎಂದಿನಂತೆ ದೈನಂದಿನ ಚಟುವಟಿಕೆಗಳು ಆರಂಭಗೊಂಡಿದ್ದು, ಯಾವ ಭಾಗದಲ್ಲಿ ಬಂದ್ ಕಾವು ಇರಲಿದೆ ಎಂದು ಇನ್ನಷ್ಟೇ ತಿಳಿಯಬೇಕಿದೆ.





