ದೇಶ- ವಿದೇಶ

ಇಂದು ಭಾರತ್‌ ಬಂದ್: ಹಲವು ಸಂಘಟನೆಗಳ ಬೆಂಬಲ

ನವದೆಹಲಿ: ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಖಂಡಿಸಿ ಹಾಗೂ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಇಂದು(ಆ.21)ಭಾರತ್‌ ಬಂದೆಗೆ ಕರೆ ನೀಡಿದೆ. ಈ ಬಂದ್‌ಗೆ ದೇಶದ ಹಲವು ಸಂಘಟನೆಗಳು ಬೆಂಬಲ ವ್ಯಕ್ತವಾಗಿದೆ.

ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಾಕ್ತವಾಗುವ ಸಾಧ್ಯತೆ ಇರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ. ಉದ್ಯಮ ಸಂಸ್ಥೆಗಳು ಸಹ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಭಾರತ್ ಬಂದ್ ಗೆ‌ ಬೆಂಬಲ ನೀಡುತ್ತೀವೆ.

ದೇಶದ ಹಲವಾರು ಎಸ್‌ಸಿ ಎಸ್‌ಟಿ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದೆ. ಮೆಡಿಕಲ್‌, ಅಗತ್ಯ ವೈದ್ಯಕೀಯ ಸೇವೆಗಳು, ಬ್ಯಾಂಕ್‌ಗಳು ಹಾಗೂ ಶಾಲಾ ಕಾಲೇಜುಗಳು ಸಾಮಾನ್ಯವಾಗಿ ಕಾರ್ಯ ನಿರ್ವಹಿಸಲಿವೆ.

ರಾಜ್ಯದಲ್ಲಿ ಎಂದಿನಂತೆ ದೈನಂದಿನ ಚಟುವಟಿಕೆಗಳು ಆರಂಭಗೊಂಡಿದ್ದು, ಯಾವ ಭಾಗದಲ್ಲಿ ಬಂದ್‌ ಕಾವು ಇರಲಿದೆ ಎಂದು ಇನ್ನಷ್ಟೇ ತಿಳಿಯಬೇಕಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

27 mins ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

42 mins ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

57 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

2 hours ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

2 hours ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

2 hours ago