ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್ ರೈಸ್ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.
ಈ ಯೋಜನೆಯ ಅಡಿ 29 ರೂಗೆ 1 ಕೆಜಿ ಅಕ್ಕಿ, 27.50 ರೂಗೆ 1 ಕೆಜಿ ಗೋಧಿಹಿಟ್ಟು, 60 ರೂಗೆ 1 ಕೆಜಿ ಕಡಲೆ ಬೇಳೆ ಮಾರಾಟ ಮಾಡಲಾಗುತ್ತಿತ್ತು. ಜನಸಂದಣಿ ಹೆಚ್ಚು ಇರುವ ಜಾಗಗಳಲ್ಲಿ ಮೊಬೈಲ್ ವ್ಯಾನ್ ಮೂಲಕ ಅಕ್ಕಿ ಬೇಳೆಯನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್.10ರವರೆಗೆ ಕೇಂದ್ರ ಸರ್ಕಾರದ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ.
ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ತೀವ್ರ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗುತ್ತಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…