ದೇಶ- ವಿದೇಶ

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

ಈ ಯೋಜನೆಯ ಅಡಿ 29 ರೂಗೆ 1 ಕೆಜಿ ಅಕ್ಕಿ, 27.50 ರೂಗೆ 1 ಕೆಜಿ ಗೋಧಿಹಿಟ್ಟು, 60 ರೂಗೆ 1 ಕೆಜಿ ಕಡಲೆ ಬೇಳೆ ಮಾರಾಟ ಮಾಡಲಾಗುತ್ತಿತ್ತು. ಜನಸಂದಣಿ ಹೆಚ್ಚು ಇರುವ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ ಬೇಳೆಯನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್.‌10ರವರೆಗೆ ಕೇಂದ್ರ ಸರ್ಕಾರದ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್‌ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್‌ ಮಾರಾಟ ಮಾಡಲಾಗಿದೆ.

ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ತೀವ್ರ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago