ಬಿಹಾರ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಅತ್ತ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನೆಡೆಯಾಗಿದೆ. ಅಲ್ಲದೆ ಬಿಜೆಪಿ ಬಿಹಾರ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಹಾದಿಯಲ್ಲಿದೆ ಎಂದು ಚುನಾವಣಾ ಆಯೋಗದ ಫಲಿತಾಂಶ ವರದಿಯು ಸೂಚಿಸುತ್ತದೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 190ಕ್ಕೂ ಅಧಿಕ ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿದೆ. 2025 ರ ಚುನಾವಣೆಯಲ್ಲಿ ಬಿಜೆಪಿ 101 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಈ ಪೈಕಿ 80ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಆ ಮೂಲಕ ಪ್ರಬಲ ರಾಜಕೀಯ ಶಕ್ತಿಯಾಗಿ ತನ್ನ ಬಲ ಪ್ರದರ್ಶನ ಮಾಡಿದೆ.
ದೆಹಲಿ, ಮಹಾರಾಷ್ಟ್ರ, ಹರಿಯಾಣ ಬಳಿಕ ಇದೀದ ಬಿಹಾರದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ.





