ದೇಶ- ವಿದೇಶ

ಭಾರಿ ಜಯದತ್ತ ಎನ್‌ಡಿಎ ; ಬಿಜೆಪಿ ಅತಿ ದೊಡ್ಡ ಪಕ್ಷ

ಬಿಹಾರ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಅತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನೆಡೆಯಾಗಿದೆ. ಅಲ್ಲದೆ ಬಿಜೆಪಿ ಬಿಹಾರ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಹಾದಿಯಲ್ಲಿದೆ ಎಂದು ಚುನಾವಣಾ ಆಯೋಗದ ಫಲಿತಾಂಶ ವರದಿಯು ಸೂಚಿಸುತ್ತದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 190ಕ್ಕೂ ಅಧಿಕ ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿದೆ. 2025 ರ ಚುನಾವಣೆಯಲ್ಲಿ ಬಿಜೆಪಿ 101 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಈ ಪೈಕಿ 80ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಆ ಮೂಲಕ ಪ್ರಬಲ ರಾಜಕೀಯ ಶಕ್ತಿಯಾಗಿ ತನ್ನ ಬಲ ಪ್ರದರ್ಶನ ಮಾಡಿದೆ.

ದೆಹಲಿ, ಮಹಾರಾಷ್ಟ್ರ, ಹರಿಯಾಣ ಬಳಿಕ ಇದೀದ ಬಿಹಾರದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

15 mins ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

42 mins ago

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಹಂಗಾಮ: ನಾಯಕರ ನಡುವೆ ಜಟಾಪಟಿ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…

2 hours ago

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

2 hours ago

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…

3 hours ago

ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಹೈಕೋರ್ಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು…

3 hours ago