ದೇಶ- ವಿದೇಶ

ಭೀಮಾ ಕೋರೆಗಾಂವ್ ಪ್ರಕರಣ: ಕವಿ ವರವರ ರಾವ್‌ಗೆ ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಭೀಮಾ ಕೋರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಬಂಧಿತರಾಗಿದ್ದ ತೆಲುಗು ಕವಿ, ಹೋರಾಟಗಾರ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಎಸ್ ರವೀಂದ್ರ ಭಟ್ ಅವರಿದ್ದ ಪೀಠ “ಈವರೆಗೂ ಆರೋಪ ನಿಗದಿಪಡಿಸಲು ಪ್ರಕರಣವನ್ನು ಎತ್ತಿಕೊಂಡಿಲ್ಲ, ಅದೇ ರೀತಿ ಆರೋಪಿಗಳು ಮತ್ತಿತರರು ತಮ್ಮ ಬಿಡುಗಡೆಗಾಗಿ ಕೋರಿದ್ದ ಅರ್ಜಿಗಳು ಕೂಡ ಬಾಕಿ ಇವೆ. ಜಾಮೀನು ಹಿಂಪಡೆಯಲು ಕಾರಣವಾಗುವಂತೆ ರಾವ್ ಅವರ ಆರೋಗ್ಯದ ಸ್ಥಿತಿ ಸಾಕಷ್ಟು ಕಾಲದಿಂದ ಸುಧಾರಿಸಿಲ್ಲ. ವರವರ ರಾವ್‌ ಅವರು ವೈದ್ಯಕೀಯ ನೆಲೆಯಲ್ಲಿ ಜಾಮೀನು ಪಡೆಯಲು ಅರ್ಹರಾಗಿದ್ದು ಜಾಮೀನನ್ನು ನಿರ್ದಿಷ್ಟ ಅವಧಿಗೆ ಸೀಮಿತಗೊಳಿಸುವ ಅಂಶಗಳುಳ್ಳ ಪ್ಯಾರಾವನ್ನು ನಾವು ತೆಗೆದುಹಾಕುತ್ತೇವೆ” ಎಂದು ಹೇಳಿತು.

ಈ ಆದೇಶ ಇತರೆ ಆರೋಪಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಮತ್ತು ರಾವ್‌ನ್ಯಾಯ ವ್ಯಾಪ್ತಿ ಅವರು ಮುಂಬೈ ನ್ಯಾಯವ್ಯಾಪ್ತಿ ತೊರೆಯುವಂತಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ರಾವ್ ಅವರಿಗೆ 82 ವರ್ಷ ವಯಸ್ಸಾಗಿದೆ. ತನಿಖಾ ಸಂಸ್ಥೆ 2018 ರಿಂದ ಕಸ್ಟಡಿ ವಿಚಾರಣೆಯ ಅವಕಾಶವನ್ನು ಹೊಂದಿತ್ತು. ಆರೋಪಪಟ್ಟಿ ಸಲ್ಲಿಕೆಯಾದರೂ ಪ್ರಕರಣದ ಕೆಲ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ರಾವ್ ಅವರ ವೈದ್ಯಕೀಯ ಸ್ಥಿತಿಯು ದೀರ್ಘಕಾಲದವರೆಗೆ ಸುಧಾರಿಸಿಲ್ಲ ಎಂಬ ಅಂಶಗಳನ್ನು ನ್ಯಾಯಾಲಯ ಜಾಮೀನು ನೀಡುವಾಗ ಪರಿಗಣಿಸಿದೆ.

ರಾವ್‌ ಅವರ ಪರವಾಗಿ ಹಿರಿಯ ನ್ಯಾಯವಾದಿ ಆನಂದ್‌ ಗ್ರೋವರ್‌ ವಾದ ಮಂಡಿಸಿದರು. ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ಡಿಸ್ಚಾರ್ಜ್‌ ಅರ್ಜಿ ಮೂಲಕ ವಿಚಾರಣೆ ವಿಳಂಬಗೊಳಿಸಲು ರಾವ್‌ ಯತ್ನಿಸುತ್ತಿದ್ದಾರೆ ಎಂದರು. ಇದಕ್ಕೂ ಮುನ್ನ ಎನ್‌ಐಎ ಪರ ವಕೀಲರು “ವರವರ ರಾವ್‌ ಅವರು ಭಾರತ ಸರ್ಕಾರದ ಪರ ನಿರಂತರ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ನ್ಯಾಯಾಲಯ ಅವಲೋಕನದ ಪ್ರಮುಖ ಅಂಶಗಳು

(ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅವರನ್ನು ಉದ್ದೇಶಿಸಿ) “ನೀವು ಅವರ ಕಾಯಿಲೆಗಳ ಬಗ್ಗೆ ತಕರಾರು ತೆಗೆದಿಲ್ಲ. ಅವರ ವಯಸ್ಸನ್ನು ನೋಡಿ. ಅವರು ಬಳಲುತ್ತಿದ್ದರೆ, ಅದು ಹೀಗೆಯೇ ಮುಂದುವರಿಯಲಿದೆ ಇಲ್ಲವೇ ಅವರ ಆರೋಗ್ಯ ಮತ್ತಷ್ಟು ಹದಗೆಡಲಿದೆ. ಅದನ್ನು ಸುಧಾರಿಸಲು ಸಾಧ್ಯವಿಲ್ಲ. ಅವರ ಆರೋಗ್ಯ ಹೇಗೆ ಸುಧಾರಿಸುತ್ತಿದೆ ಎಂಬುದನ್ನು ನಿರೂಪಿಸಿ…

ಎನ್‌ಐಎ ಏಕೆ ತಡವಾಗಿ ತನಿಖೆಯ ಹೊಣೆ ವಹಿಸಿಕೊಂಡಿತು. ಯುಎಪಿಎ ಅಡಿ ಆರೋಪ ಇದ್ದರೆ ಕೂಡಲೇ ರಾಜ್ಯ ಸರ್ಕಾರ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು. ನಾವು ಸಮಗ್ರ ದೃಷ್ಟಿಕೋನದಿಂದ ನೋಡಬೇಕು. ತಮ್ಮ 82ನೇ ವಯಸ್ಸಿನಲ್ಲಿ ಅವರು 2.5 ವರ್ಷಗಳ ಕಾಲ ಜೈಲಿನಲ್ಲಿದ್ದಾರೆ. ಅವರಿಗೆ ನೀಡಲಾದ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕೂಡ ನೀವು ಹೇಳುತ್ತಿಲ್ಲ.

ಜಾಮೀನು ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಗೊಳಿಸಲಾಗುವುದು ಎಂಬ ಷರತ್ತು ವಿಧಿಸುತ್ತಿದ್ದೇವೆ.

ಹಿನ್ನೆಲೆ
2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಹಿಂಸಾಚಾರದ ಆರೋಪಿಯಾಗಿರುವ ವರವರ ರಾವ್ ಅವರು ವೈದ್ಯಕೀಯ ಕಾರಣಗಳಿಗಾಗಿ ಶಾಶ್ವತ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವರವರ ರಾವ್‌ ಸೇರಿದಂತೆ ಎಂಟು ಆರೋಪಿಗಳಿಗೆ ಬಾಂಬೆ ಹೈಕೋರ್ಟ್‌ ಡಿಸೆಂಬರ್ 1, 2021 ರಂದು ಜಾಮೀನು ನಿರಾಕರಿಸಿತ್ತು. ಆದರೆ ಪ್ರಕರಣದ ಸಹ ಆರೋಪಿ, ವಕೀಲೆ ಹಾಗೂ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್‌ ಅವರಿಗೆ ಜಾಮೀನು ನೀಡಿತ್ತು.

andolana

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

24 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

28 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

31 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

33 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

35 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

38 mins ago