ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್ ಸ್ಟೀಲ್ ಹಾಗೂ ಪವರ್ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ಸಂಸ್ಥೆಯೂ ಹಸ್ತಾಂತರಿಸಿದೆ.
ಇಡಿ ತನಿಖಾ ಸಂಸ್ಥೆಯೂ ಮುಟ್ಟುಗೋಲು ಹಾಕಿಕೊಂಡಿದ್ದ ಭೂಷಣ್ ಸ್ಟೀಲ್‌ಗೆ ಸಂಬಂಧಿಸಿದ ಆಸ್ತಿಯನ್ನು ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಜಾರಿ ನಿರ್ದೇಶನಾಲಯ (ಇಡಿ) ಸಂಸ್ಥೆಯೂ ಜೆಎಸ್‌ಡಬ್ಲ್ಯೂ ಕಂಪನಿಗೆ ಇಂದು(ಡಿ.13) ಹಸ್ತಾಂತರಿಸಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಭೂಷಣ್ ಸ್ಟೀಲ್ ಕಂಪೆನಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಬಳಿಕ ಅದರಲ್ಲಿ ಬ್ಯಾಂಕ್ ಸಾಲ ವಂಚನೆ, ಹಣವನ್ನು ಬೇರೆಡೆ ವರ್ಗಾಯಿಸಿದ ಆರೋಪವನ್ನು ಭೂಷಣ್ ಕಂಪೆನಿ ಎದುರಿಸುತ್ತಿತ್ತು. ಹೀಗಾಗಿ ದಿವಾಳಿಯಾದ ಕಾರಣ ಆ ಕಂಪೆನಿಯ ಆಸ್ತಿಯನ್ನು ಖರೀದಿಸಲು ಜೆಎಸ್‌ಡಬ್ಲ್ಯೂ ಆಸಕ್ತಿ ಹೊಂದಿತ್ತು. ಕಾರ್ಪೋರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯ ನಿಯಮದಡಿ ಭೂಷಣ್ ಸ್ಟೀಲ್‌ನ ಆಸ್ತಿ ಖರೀದಿಗೆ ಜೆಎಸ್‌ಡಬ್ಲ್ಯೂ ಕಂಪೆನಿ ಸುಪ್ರೀಂಕೋರ್ಟ್‌ಗೆ ಅರ್ಜಿಸಲ್ಲಿಸಿತ್ತು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇಡಿ ತನಿಖಾ ಸಂಸ್ಥೆಗೆ ಭೂಷಣ್ ಸ್ಟೀಲ್ ಕಂಪೆನಿಯ ಸುಮಾರು 4,025 ಕೋಟಿ ರೂ. ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ಹಸ್ತಾಂತರರಿಸುವಂತೆ ಆದೇಶ ನೀಡಿತ್ತು. ಸುಪ್ರೀಂನ ಈ ಆದೇಶದ ಮೇರೆಗೆ ಇಡಿ ತನಿಖಾ ಸಂಸ್ಥೆಯೂ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ವರ್ಗಾಯಿಸಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…