ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ಅನ್ನದಾತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯ್ಲಲಿ ಶಂಭು ಗಡಿಯಲ್ಲಿ ರೈತರು ಭಾರೀ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.
ಇಂದು ಮಧ್ಯಾಹ್ನ ಶಂಭು ಗಡಿಯಿಂದ ದೆಹಲಿಯ ಸಂಸತ್ ಭವನಕ್ಕೆ ಪಾದಯಾತ್ರೆ ಪ್ರಾರಂಭವಾಗಲಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಎಂಎಸ್‌ಸಿಕೆ ಕಾನೂನುಬದ್ಧ ಖಾತರಿ, ರೈತರ ಸಾಲಮನ್ನಾ, ರೈತರು ಮತ್ತು ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ, ವಿದ್ಯುತ್ ದರ ಹೆಚ್ಚಿಸಬಾರದು, 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. 2013ರ ಭೂ ಸ್ವಾಧೀನ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯ ಹಾಗೂ 2020-21ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲಾಗುತ್ತಿದ್ದು, ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗಿದೆ.
ಇನ್ನು ದೆಹಲಿಯ ಸಂಸತ್ ಭವನದ ಸುತ್ತಲೂ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…
ಮಂಡ್ಯ : ಪ್ರಸ್ತುತ ಭಾರತ ದೇಶದಲ್ಲಿ ಮಹಿಳಾ ಸಾಕ್ಷರತೆ ಶೇ.69ರಷ್ಟಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು. ನಗರದ ಹರ್ಡೀಕರ್ಭವನದಲ್ಲಿ…
ಮೈಸೂರು : ನಗರ ಮತ್ತು ಹೊರ ವಲಯದ ಬಡಾವಣೆಗಳು, ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಗಳ ಕಾಲ ಕುಡಿಯುವ…
ಗುವಾಹಟಿ : ಭಾರತ ಮತ್ತು ಬಾಂಗ್ಲಾದೇಶ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಘ್ನಗೊಂಡಿರುವ ನಡುವೆ, ಇಂಡಿಯನ್ ಪ್ರಿಮಿಯರ್ ಲೀಗ್ನ(ಐಪಿಎಲ್) 2026ರ…
ಬೆಂಗಳೂರು : ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಶಾಸಕ ನ.ರಾ.ಭರತ್ ರೆಡ್ಡಿ ಪರವಾಗಿ ನಿಲ್ಲಲಿದೆ. ಚುನಾವಣೆಗಳ ಸೋಲಿನಿಂದ ಹತಾಶೆಗೊಂಡಿರುವ ಶಾಸಕ…