ದೇಶ- ವಿದೇಶ

ಶಂಭು ಗಡಿಯಲ್ಲಿ ಅನ್ನದಾತರ ಬೃಹತ್‌ ಪ್ರತಿಭಟನೆ

ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ಅನ್ನದಾತರು ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯ್ಲಲಿ ಶಂಭು ಗಡಿಯಲ್ಲಿ ರೈತರು ಭಾರೀ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.

ಇಂದು ಮಧ್ಯಾಹ್ನ ಶಂಭು ಗಡಿಯಿಂದ ದೆಹಲಿಯ ಸಂಸತ್‌ ಭವನಕ್ಕೆ ಪಾದಯಾತ್ರೆ ಪ್ರಾರಂಭವಾಗಲಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾ ಬ್ಯಾನರ್‌ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಎಂಎಸ್‌ಸಿಕೆ ಕಾನೂನುಬದ್ಧ ಖಾತರಿ, ರೈತರ ಸಾಲಮನ್ನಾ, ರೈತರು ಮತ್ತು ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ, ವಿದ್ಯುತ್‌ ದರ ಹೆಚ್ಚಿಸಬಾರದು, 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. 2013ರ ಭೂ ಸ್ವಾಧೀನ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯ ಹಾಗೂ 2020-21ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲಾಗುತ್ತಿದ್ದು, ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಸಹ ಮಾಡಲಾಗಿದೆ.

ಇನ್ನು ದೆಹಲಿಯ ಸಂಸತ್‌ ಭವನದ ಸುತ್ತಲೂ ಭಾರೀ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago