ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಇಲಾಖೆ ತನಿಖೆಗೆ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶ ಹೊರಡಿಸಿದೆ. ಈ ಮೂಲಕ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಸರ್ಕಾರ ಇಲಾಖೆ ತನಿಖೆ ಆದೇಶ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿತ್ತು.
ಇದನ್ನೂ ಓದಿ:-ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗೋದು ಪಕ್ಕಾ: ಮಾಜಿ ಸಚಿವ ಕೆ.ಎನ್.ರಾಜಣ್ಣ
ಈ ಹಿನ್ನೆಲೆಯಲ್ಲಿ ಪ್ರಕರಣ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣಜಿತ್ ಬಳಿ ಹೋಗಿತ್ತು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಣಜಿತ್ ಇಂದು ತೀರ್ಪು ಪ್ರಕಟಿಸಿದ್ದಾರೆ.
ಅಲೋಕ್ ಕುಮಾರ್ ವಿರುದ್ಧ ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿದ್ದು, ಅಲೋಕ್ ಕುಮಾರ್ ಅವರಿಗೆ ಸಲ್ಲಬೇಕಾದ ಬಡ್ತಿ ಸವಲತ್ತು ನೀಡುವಂತೆ ಆದೇಶ ಹೊರಡಿಸಲಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…