Mysore
29
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಿರಾಕರಿಸಿದ್ದು, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧದ ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ನ್ಯಾಯಾಲಯ ಇಂದು ನಿರಾಕರಣೆ ಮಾಡಿದೆ.

ಇದನ್ನು ಓದಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಇಡಿ ಸಲ್ಲಿಸಿದ್ದ ಚಾರ್ಜ್‌ಶೀಟ್‌ ಪರಿಗಣಿಸಲ್ಲ ಎಂದು ಕೋರ್ಟ್‌ ಆದೇಶ ನೀಡಿದ್ದು, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ರೋಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್‌ ಗೋಗ್ನೆ, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ದೂರು ಖಾಸಗಿ ದೂರನ್ನು ಆಧರಿಸಿದೆ. ಪ್ರಥಮ ಮಾಹಿತಿ ವರದಿ ಅಲ್ಲದ ಕಾರಣ ಅದನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Tags:
error: Content is protected !!