ದೇಶ- ವಿದೇಶ

ಬಿಹಾರ ಚುನಾವಣೆ | ನಿತೀಶ್‌ ಕುಮಾರ್‌ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ

ಪಟ್ನಾ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಎನ್‌ಡಿಎ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬುಧವಾರ ಹೇಳಿದ್ದಾರೆ.

ಬಿಹಾರ ಚುನಾವಣೆಗೆ ಮುಹೂರ್ತ ನಿಗದಿಯಾದ ಬೆನ್ನಲ್ಲೇ ಬಿಜೆಪಿಯ ಹಿರಿಯ ನಾಯಕರಿಂದ ಈ ಹೇಳಿಕೆ ದಾಖಲಾಗಿದೆ. ಸೀಟು ಹಂಚಿಕೆ ಸಂಬಂಧ ಎನ್‌ಡಿಎ ಮೈತ್ರಿಕೂಟದಲ್ಲಿ ಯಾವುದೇ ಭಿನ್ನಮತವಿಲ್ಲ. ಶೀಘ್ರದಲ್ಲೇ ಸೀಟು ಹಂಚಿಕೆ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ : ಬಿಹಾರ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್‌: ಎರಡು ಹಂತದಲ್ಲಿ ಚುನಾವಣೆ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಎನ್‌ಡಿಎ ಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿ. ಎನ್‌ಡಿಎದಲ್ಲಿ ಎಲ್ಲವೂ ಸರಿಯಾಗಿದ್ದು, ಭಿನ್ನಮತವಿಲ್ಲ. ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಈ ನಡುವೆ ವಿರೋಧ ಪಕ್ಷಗಳ ಮಹಾಘಟಬಂಧನ ಮೈತ್ರಿಯ ವಿರುದ್ಧ ಗಿರಿರಾಜ್ ವಾಗ್ದಾಳಿ ನಡೆಸಿದ್ದಾರೆ. ತೇಜಸ್ವಿ ಯಾದವ್ ಆರ್‌ಜೆಡಿಯ ಮುಖ್ಯಮಂತ್ರಿ ಅಭ್ಯರ್ಥಿ ಆಗಿದ್ದು, ಮಹಾಘಟಬಂಧನ ಮೈತ್ರಿಯ ಅಭ್ಯರ್ಥಿಯಲ್ಲ ಎಂದು ಕಾಂಗ್ರೆಸ್ ಹೇಳಿದೆ. ಇದರಿಂದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಚಿಂತಿತರಾಗಿದ್ದಾರೆ. ಮಹಾಘಟಬಂಧನದಲ್ಲಿ ನಾಯಕತ್ವ ಇನ್ನೂ ಅಂತಿಮವಾಗಿಲ್ಲ. ಮತ್ತೊಂದೆಡೆ ಎನ್‌ಡಿಎ ನಾಯಕತ್ವದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ಹೇಳಿದ್ದಾರೆ. ೨೪೩ ಸ್ಥಾನ ಬಲದ ಬಿಹಾರ ವಿಧಾನಸಭೆ ಚುನಾವಣೆ ನವೆಂಬರ್ ೬ ಹಾಗೂ ೧೧ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಬಳಿಕ ನವೆಂಬರ್ ೧೪ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

19 mins ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

2 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

3 hours ago